ಬಿಎಂಟಿಸಿ ಬಸ್​ ಎಂಜಿನ್​ನಲ್ಲಿ ಬೆಂಕಿ: ತಪ್ಪಿದ ಭಾರೀ ಅನಾಹುತ

ಬೆಂಗಳೂರು: ನೆಲಮಂಗಲ ಸಮೀಪದ ಮಾದವಾರ ಬಳಿ ನೆಲಮಂಗಲದಿಂದ ಶಿವಾಜಿನಗರಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್​​ವೊಂದರ ಎಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್​ನಲ್ಲಿ ಶಾಲಾ ಮಕ್ಕಳು, ವೃದ್ಧರು ಸೇರಿದಂತೆ 35 ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ. ಇನ್ನು ನವಯುಗ ಟೋಲ್​ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv