ಕೆರೆಯಲ್ಲಿ ಈಜಲು ಹೋಗಿ ಯುವಕ ನೀರುಪಾಲು

ನೆಲಮಂಗಲ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ. ಪೀಣ್ಯದ ಅಂಧ್ರಹಳ್ಳಿ ಗ್ರಾಮದ ನಿವಾಸಿ ಪಾಪಣ್ಣ ಮತ್ತು ಗೀತಾ ದಂಪತಿಗಳ ಮಗ ಪ್ರಜ್ವಲ್(15) ಮೃತ ಯುವಕ.

ಪ್ರಜ್ವಲ್ ಬೆಂಗಳೂರು ಉತ್ತರ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ಕೆರೆಯಲ್ಲಿ ಸ್ನೇಹಿತರ ಜೊತೆ ಈಜಾಡಲು ಹೋಗಿದ್ದ ಸಂದರ್ಭದಲ್ಲಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಯುವಕನ ಮೃತ ದೇಹಕ್ಕಾಗಿ ನೆಲಮಂಗಲ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಕೆರೆಯಲ್ಲಿ ತೀವ್ರಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *