ಲಾರಿ ಡಿಕ್ಕಿಯಾಗಿ ಬಾಲಕ ಸಾವು

ದಾವಣಗೆರೆ: ಲಾರಿ ಡಿಕ್ಕಿಯಾಗಿ ಬಾಲಕನೊಬ್ಬ ಸಾವನ್ನಪ್ಪಿರೋ ಘಟನೆ ಹರಪನಹಳ್ಳಿ ತಾಲೂಕಿನ ಮಲೆಬೆನ್ನೂರು- ಕೊಮಾರನಹಳ್ಳಿ ಬಳಿ ನಡೆದಿದೆ.
ಅಜಯ್(9) ಮೃತ ಬಾಲಕ. ಈತ ರಸ್ತೆ ದಾಟುವಾಗ ಎಚ್.ಪಿ ಗ್ಯಾಸ್ ಕಂಪನಿ ಸಿಲಿಂಡರ್​ ಸಾಗಿಸುವ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಅಜಯ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಬಾಲಕನ ಶವವಿಟ್ಟು ರಸ್ತೆ ತಡೆ ನಡೆಸಿದ್ದಾರೆ. ಹೀಗಾಗಿ ಶಿವಮೊಗ್ಗ- ಹರಿಹರ ರಾಜ್ಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ.
ಇನ್ನು ಹೆದ್ದಾರಿ ರಸ್ತೆ ಹದಗೆಟ್ಟ ಹಿನ್ನೆಲೆ ‌ನಿತ್ಯ ಅಪಘಾತ, ದುರಂತಗಳು ಸಂಭವಿಸುತ್ತಿವೆ. ಈ ಕುರಿತು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಜನರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಮಲೆಬೆನ್ನೂರ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv