ಯುವಕ ನಾಪತ್ತೆ: ಬಸ್ತಿ ಹಳ್ಳದಲ್ಲಿ ಕೊಚ್ಚಿ ಹೋಗಿರುವ ಶಂಕೆ..!

ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಬಸ್ತಿ ಹಳ್ಳದಲ್ಲಿ ಯುವಕನೊಬ್ಬ ಕೊಚ್ಚಿ ಹೋಗಿರೋ ಶಂಕೆ ವ್ಯಕ್ತವಾಗಿದೆ. ಯುವಕನಿಗಾಗಿ ಕೊಗ್ರೆ ಗ್ರಾಮದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಶೃಂಗೇರಿ ತಾಲೂಕಿನ ಮೇಗೂರು ಗ್ರಾಮದ ಆಶೋಕ್ ಎಂಬಾತ ಬಸ್ತಿ ಹಳ್ಳದಲ್ಲಿ ಕೊಚ್ಚಿ ಹೋಗಿರೋ ಶಂಕೆ ವ್ಯಕ್ತವಾಗಿದೆ. ಜಯಪುರ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಶೋಧಕಾರ್ಯ ನಡೆಸುತ್ತಿದ್ದಾರೆ. ಬೈಕ್​​ನಲ್ಲಿ ಆಶೋಕ್ ಕೊಗ್ರೆ ಗ್ರಾಮಕ್ಕೆ ಹೋಗಿದ್ದರು ಎನ್ನಲಾಗಿದೆ. ಹಳ್ಳದ ಬಳಿ ಬೈಕ್ ಟೈರ್ ಗುರುತು ಪತ್ತೆ ಹಿನ್ನೆಲೆಯಲ್ಲಿ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.