ಲಂಚ ಸ್ವೀಕರಿಸುವಾಗಲೇ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

ಬಾಗಲಕೋಟೆ: ಲಂಚ ಪಡೆಯುತ್ತಿದ್ದ ವೇಳೆಯೇ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಎಸಿಬಿ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿ ನಡೆದಿದೆ. ವಿಜಯಕುಮಾರ ಷಹಾಪುರಕರ ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ. ವಿಜಯಕುಮಾರ, ಆಡಿಹಾಳ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ. ಆಸ್ತಿ ಭಾಗ ಮಾಡುವ ಕೆಲಸಕ್ಕೆ ಗ್ರಾಮದ ಸಂಗಪ್ಪ ಗೌಡರ ಎಂಬ ರೈತನಿಂದ 15 ಸಾವಿರ ರೂ ಲಂಚ ಕೇಳಿದ್ದ. ಖಚಿತ ಮಾಹಿತಿ ಮೇರೆಗೆ ಎಸಿಬಿ ಡಿವೈಎಸ್​ಪಿ ವಿಜಯಕುಮಾರ ಬಿಸ್ನಳ್ಳಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ರೈತ ಸಂಗಪ್ಪ ಗೌಡರಿಂದ 7 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾನೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv