ಪಿತೃ ಪಕ್ಷದಲ್ಲೂ ಅಣ್ಣ ತಮ್ಮಂದಿರು ಒಂದಾಗಲಿಲ್ಲ: ಕೆ.ಎಸ್‌.ಈಶ್ವರಪ್ಪ ಲೇವಡಿ

ಶಿವಮೊಗ್ಗ: ಪಿತೃ ಪಕ್ಷದಲ್ಲಿ ಅಣ್ಣ ತಮ್ಮಂದಿರು ಒಂದಾಗುತ್ತಾರೆ. ಆದರೆ ನಿನ್ನೆ ಮೈಸೂರಿನಲ್ಲಿ ನಡೆದ ದಸರಾ ಆಚರಣೆಯಲ್ಲಿ ಕೇವಲ ಜೆಡಿಎಸ್​​ನವರು ಮಾತ್ರ ಭಾಗವಹಿಸಿದ್ದಾರೆ ಎಂದು ಶಾಸಕ ಕೆ.ಎಸ್​ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಶಿಕಾರಿಪುರದ ಮಂಗಳ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್​​ನವರ ಆಟ ನಡೆಯುತ್ತಿದ್ದು, ಶಕ್ತಿ ಹೀನ ಕಾಂಗ್ರೆಸ್ಸಿಗರು ಕೇವಲ ಸಚಿವ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೆ ಗೆದ್ದು ಪ್ರಧಾನಿ ಆಗುತ್ತಾರೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮತ್ತೆ ಚುನಾವಣೆ ನಡೆದು ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು. ಶಿವಮೊಗ್ಗ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಮತ್ತು ಜೆಡಿಎಸ್​​ಗೆ ಅಭ್ಯರ್ಥಿಯೇ ಇಲ್ಲವಾಗಿದೆ. ಈ ಚುನಾವಣೆ ಒಂದು ರೀತಿಯಲ್ಲಿ ಟೆಸ್ಟ್ ಡೋಸ್ ಇದ್ದ ಹಾಗೆ ಎಂದು ಅಭಿಪ್ರಾಯಪಟ್ಟರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv