ಇಂದು ‘ವಿಜಯ ಸಂಕಲ್ಪ ಯಾತ್ರೆ’ಗೆ ಬ್ರೇಕ್.. ಚಾಯ್​ ಪೇ ಚರ್ಚಾ ​ಪ್ರಚಾರ..!

ಬೆಂಗಳೂರು: ರಾಜ್ಯಾದ್ಯಂತ ಹಮ್ಮಿಕೊಂಡಿರುವ ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಬ್ರೇಕ್ ನೀಡಿದ್ದಾರೆ. 2019 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿ‌.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಯಾತ್ರೆ ನಡೆಯುತ್ತಿದ್ದು, ಇಂದು ಯಾತ್ರೆಗೆ ಬ್ರೇಕ್​ ನೀಡಿ ಬೆಂಗಳೂರಿನಲ್ಲಿದ್ದಾರೆ. ಸಮಾವೇಶಗಳಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು  ಜನರಿಗೆ ತಲುಪಿಸುವ ಕೆಲಸವನ್ನ ಬಿಜೆಇ ನಾಯಕರು ಮಾಡುತ್ತಿದ್ದಾರೆ. ಸದ್ಯ ನಗರದಲ್ಲಿ ಬೀಡು ಬಿಟ್ಟಿರುವ ಬಿಎಸ್​ವೈ ಅಂಡ್​ ಟೀಂ ಮಧ್ಯಾಹ್ನ 1 ಘಂಟೆಗೆ ಮಲ್ಲೇಶ್ವರಂನ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿ ನಡೆಸಲಿದೆ. ಸುದ್ದಿಗೋಷ್ಠಿಯಲ್ಲಿ  2019 ರ ಲೋಕಸಭಾ ಚುನಾವಣೆಗೆ ಬಿಜೆಪಿಯ ಸಿದ್ಧತೆಗಳು, ಮೋದಿ ವಿಜಯ ಸಂಕಲ್ಪ ಯಾತ್ರೆಯ ಯಶಸ್ಸು ಸೇರಿದಂತೆ ಅನೇಕ ವಿಚಾರಗಳನ್ನು ಪ್ರಸ್ತಾಪಿಸಲಿದ್ದಾರೆ.


Follow us on:

YouTube: firstNewsKannada Instagram: firstnews.tv Facebook: firstnews.tv Twitter: firstnews.tv