ಆಪರೇಷನ್ ಕಮಲ ಆಡಿಯೋ ಕೇಸ್​; ಬಿಎಸ್​ವೈಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಬೆಂಗಳೂರು: ಆಪರೇಷನ್ ಕಮಲ ಆಡಿಯೋ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪಗೆ ಸದ್ಯ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್​ಐಆರ್​​​ ದಾಖಲಾಗಿತ್ತು. ಈ ಸಂಬಂಧ ಸಿಟಿ ಸಿವಿಲ್ ಕೋರ್ಟಿನಿಂದ ಬಿಎಸ್​​ವೈಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಫೆಬ್ರವರಿ 8ರಂದು ಸಿಎಂ ಕುಮಾರಸ್ವಾಮಿ ರಿಲೀಸ್​ ಮಾಡಿದ್ದ ಆಪರೇಷನ್ ಕಮಲದ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿ‌ ನಾಲ್ವರ ವಿರುದ್ಧ ರಾಯಚೂರಿನ ದೇವದುರ್ಗ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜೆಡಿಎಸ್ ಶಾಸಕ ನಾಗನಗೌಡ ಕಂದಕೂರು ಪುತ್ರ ಶರಣಗೌಡ ನೀಡಿದ್ದ ದೂರಿನ ಮೇರೆಗೆ ದೇವದುರ್ಗ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಬಿಎಸ್​ವೈ ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನ 82ನೇ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು.

ವಿಚಾರಣೆ ನಡೆಸಿದ ಕೋರ್ಟ್​, ಮಾಜಿ ಸಿಎಂ ಯಡಿಯೂರಪ್ಪ, ಶಾಸಕರಾದ ಶಿವನಗೌಡ ನಾಯಕ್ ಹಾಗೂ ಶಾಸಕ ಪ್ರೀತಂ ಗೌಡಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. 1 ಲಕ್ಷ ಬಾಂಡ್ ಹಾಗೂ ಸಾಕ್ಷಿ ನಾಶ ಮಾಡಬಾರದೆಂದು ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ.

ಇದನ್ನೂ ಓದಿ: ಆಡಿಯೋ ಪ್ರಕರಣ: ಬಿಎಸ್‌ವೈ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಕೋರಲು ಸಿದ್ಧತೆ


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv