ಮತ್ತೆ ಪ್ರಚಾರ ಅಖಾಡಕ್ಕೆ ಇಳಿಯಲಿದ್ದಾರೆ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಉಪ ಚುನಾವಣೆಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭರ್ಜರಿ ಪ್ರಚಾರ ಮಾಡಲು ಪ್ಲಾನ್ ಮಾಡಿದ್ದಾರೆ. ನವರಾತ್ರಿ ಹಬ್ಬ ಸಂಭ್ರಮದ ಜೊತೆ ಬಿಎಸ್​ವೈ ಪ್ರಚಾರಕ್ಕೆ ಇಳಿಯಲಿದ್ದು, ಮೊದಲಿಗೆ ತಮ್ಮ ಪುತ್ರ ಹಾಗೂ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಪ್ರಚಾರ ನಡೆಸಲಿದ್ದಾರೆ.

ಅಕ್ಟೋಬರ್ 15ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ನಾಲ್ಕು ದಿನಗಳ ಕಾಲ ಶಿವಮೊಗ್ಗದಲ್ಲಿ ಪ್ರಚಾರದ ಮಾಡಿದ ಬಳಿಕ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ಪರ ಪ್ರಚಾರ ಮಾಡಲಿದ್ದಾರೆ. ನಂತರ ಜಮಖಂಡಿ, ರಾಮನಗರ ಮತ್ತು ಮಂಡ್ಯ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.