ಸಮಗ್ರ ಕರ್ನಾಟಕದ ಚಿಂತನೆ ಇಲ್ಲದ ಬಜೆಟ್: ಸಿ.ಟಿ.ರವಿ‌

ಚಿಕ್ಕಮಗಳೂರು: ಮುಖ್ಯಮಂತ್ರಿ, ಹಣಕಾಸು ಸಚಿವ ಹೆಚ್​ಡಿ ಕುಮಾರಸ್ವಾಮಿ ರಾಜ್ಯ ಬಜೆಟ್ ಮಂಡನೆ ಮಾಡಿದ ಬೆನ್ನಲ್ಲೇ ಅಸಮಾಧಾನ ಭುಗಿಲೆದ್ದಿದೆ. ಇದು ಕೇವಲ ಎರಡು ಮೂರು ಜಿಲ್ಲೆಗೆ ಮಾತ್ರ ಸೀಮಿತವಾದ ಬಜೆಟ್ ಅಂತಾ ಶಾಸಕ ಸಿ.ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಜೆಟ್​ ಕುರಿತು ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಈಡೇರಿಲ್ಲ. ನಮ್ಮ ಜಿಲ್ಲೆಗೆ ಸಂಪೂರ್ಣವಾಗಿ ಮೋಸ ಆಗಿದೆ ಎಂದು ಹೇಳಿದರು. ನಮ್ಮ ಚಿಕ್ಕಮಗಳೂರು ಜಿಲ್ಲೆಯಲ್ಲಿ 5 ನದಿ ಹುಟ್ಟುತ್ತೆ. ಕೇವಲ ಎರಡು ಮೂರು ಜಿಲ್ಲೆಗೆ ಮಾತ್ರ ಇರುವ ಬಜೆಟ್ ಇದು. ಈ ಕುರಿತು ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ಸಿ.ಟಿ ರವಿ  ಕಿಡಿ ಕಾರಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv