4 ಅಂತಸ್ತಿನ ಕಟ್ಟಡ ಕುಸಿತ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಧಾರವಾಡ: ನಗರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಭಂದ ಪಟ್ಟಂತೆ ಭರದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಎರಡು ಎನ್ ಡಿ ಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯ ಮುಂದುವರೆದಿದ್ದು, ಮಧ್ಯರಾತ್ರಿ ಲಖನೌದಿಂದ, ಬೆಳಗ್ಗೆ ದೆಹಲಿಯಿಂದ ಆಗಮಿಸಿದ ಎನ್ ಡಿ ಆರ್ ಎಫ್ ತಂಡಗಳು, ಕಟ್ಟಡದ ಅವಶೇಷಗಳನ್ನು ಕೊರೆದು ರಕ್ಷಣಾ ಕಾರ್ಯಕ್ಕೆ ಸಿಬ್ಬಂದಿ ಮುಂದಾಗಿದ್ದಾರೆ. ಘಟನೆಯಲ್ಲಿ ಸಾವಿನ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಕುಮಾರೇಶ್ವರ ನಗರದಲ್ಲಿ ಕಟ್ಟಡ ಕುಸಿದ ಜಾಗದಲ್ಲಿ ಕಳೆದ 18 ಗಂಟೆಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಇನ್ನು ಈ ತಂಡ ಇದವರೆಗೂ 55 ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಿದೆ.


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv