ಐದು ಅಂತಸ್ತಿನ ಕಟ್ಟಡ ಕುಸಿತ, ಓರ್ವ ದುರ್ಮರಣ

ಧಾರವಾಡ: ಇಲ್ಲಿನ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕಳೆದೆರಡು ವರ್ಷಗಳಿಂದ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಇಂದು ಮಧ್ಯಾಹ್ನ ಕುಸಿದು ಬಿದ್ದಿದ್ದು, ಸಾವು ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕಟ್ಟಡದ ಅವಶೇಷಗಳಡಿ ಹಲವು ಮಂದಿ ಸಿಲುಕಿದ್ದು, ರಕ್ಷಣಾಕಾರ್ಯ ಭರದಿಂದ ಸಾಗಿದೆ. ಇದುವರೆಗೂ 18ಕ್ಕೂ ಹೆಚ್ಚು ಮಂದಿಯ್ನ ರಕ್ಷಣೆ ಮಾಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv