ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ, ಹಲವರಿಗೆ ಗಾಯ

ಧಾರವಾಡ: ಧಾರವಾಡ ಕುಮಾರೇಶ್ವರ ನಗರದಲ್ಲಿ ಇಂದು ನಿರ್ಮಾಣ ಹಂತದ ಕಟ್ಟಡ ಕುಸಿದು ಭಾರೀ ದುರಂತ ಸಂಭವಿಸಿದೆ. ಐದು ಅಂತಸ್ತಿನ ಕಟ್ಟಡ ಸಂಪೂರ್ಣ ನೆಲಸಮವಾಗಿದೆ. ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ಕೆಲವರು ಗಾಯಗೊಂಡಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.