ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ, ಶೃಂಗೇರಿ ಸಮೀಪದ ತೋರೆಹಡ್ಲು ಗ್ರಾಮದ ಸಮೀಪ ನಡೆದಿದೆ. ಶೃಂಗೇರಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ  ವೇಳೆ ಘಟನೆ ನಡೆದಿದ್ದು, 22 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಭಾರೀ ಮಳೆಯಿಂದ ರಸ್ತೆಗಳು ಕಾಣದಂತಾಗಿದ್ದೆ, ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv