ಬಸ್​-ಕಾರು ಡಿಕ್ಕಿ: ಕಾರು ಚಾಲಕನ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಕೆಎಸ್ಆರ್​ಟಿಸಿ ಬಸ್ ಹಾಗೂ ಮಾರುತಿ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಕಾರಣ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಈ ಘಟನೆ ಮೂಡಿಗೆರೆ ತಾಲೂಕಿನ ಗಾಂಧಿಘರ್ ಗ್ರಾಮದ ಬಳಿ ನಡೆದಿದೆ. ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಗೋಣಿಬೀಡು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.