ಅಂತೂ ಆರಂಭವಾಯ್ತು ಬಹುನಿರೀಕ್ಷಿತ ಬಿಆರ್ ಟ್ರಾನ್ಸೀಟ್​ ಸಂಚಾರ

ಹುಬ್ಬಳ್ಳಿ: ಅವಳಿ ನಗರಗಳ ಬಹುನಿರೀಕ್ಷಿತ ಬಿಆರ್ ಟ್ರಾನ್ಸೀಟ್ (Bus rapid transit system) ಯೋಜನೆಯಡಿ ಪ್ರಾಯೋಗಿಕ ಬಸ್ ಸಂಚಾರ ಇಂದು ಆರಂಭವಾಗಿದೆ.
2011 ರಲ್ಲಿ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದ ವೇಳೆ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಲ್ಲಿ ಬಿಆರ್ ಟ್ರಾನ್ಸೀಟ್ ಯೋಜನೆ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಯೋಜನೆಗೆ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ, ಮುಂದಾಲೋಚನೆ ಮಾಡದೇ ಯೋಜನೆಗೆ ಚಾಲನೆ ನೀಡಲಾಗಿದೆ ಎಂಬ ಆರೋಪಗಳೂ ಕೇಳಿಬಂದಿದ್ದವು. ಆದಾಗ್ಯೂ ತರಾತುರಿಯಲ್ಲಿ ಆಗಿನ ಸಿಎಂ ಜಗದೀಶ್ ಶೆಟ್ಟರ್ ಯೋಜನೆಗೆ ಚಾಲನೆ ನೀಡಿದ್ದರು.
ಸಿಎಂ ಆಗಿದ್ದ ಜಗದೀಶ್ ಶೆಟ್ಟರ್ ಅಧಿಕಾರದಿಂದ ಕೆಳಗಿಳಿಯುತ್ತಿದ್ದಂತೆ ಯೋಜನೆಯ ಕಾಮಗಾರಿ ಆಮೆಗತಿಯಲ್ಲಿ ಸಾಗಿತ್ತು. 7 ವರ್ಷಗಳಿಂದ ಕುಂಟುತ್ತಾ ಸಾಗಿದ್ದ ಯೋಜನೆ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಆಗದಿದ್ದರೂ, ಪ್ರಾಥಮಿಕ ಹಂತದ ಯೋಜನೆ ಪೂರ್ಣಗೊಂಡು ನಗರದ ರೈಲ್ವೇ ನಿಲ್ದಾಣದಿಂದ ಶ್ರೀನಗರವರೆಗೆ ಕಾಮಗಾರಿ ಪೂರ್ಣಗೊಂಡಿದೆ.
ಹುಬ್ಬಳ್ಳಿ- ಧಾರವಾಡ ನಗರಗಳ ಮಧ್ಯೆ ತ್ವರಿತ ಸಾರಿಗೆ ವ್ಯವಸ್ಥೆ ಇದಾಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಉಪ ಸಭಾಪತಿ ಬಸವರಾಜ್ ಹೊರಟ್ಟಿ ಇಂದು ಅಧಿಕೃತ ಚಾಲನೆ ನೀಡಿ, ಲೋಕಾರ್ಪಣೆ ಮಾಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv