By-Election: ಕುಂದಗೋಳ ಶೇ. 81.33, ಚಿಂಚೋಳಿಯಲ್ಲಿ ಶೇ.70.30 ಮತದಾನ

ಬೆಂಗಳೂರು: ಇಂದು ರಾಜ್ಯ ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಿತು. ಕಲಬುರ್ಗಿ ಜಿಲ್ಲೆ ಚಿಂಚೋಳಿ ಹಾಗೂ ಧಾರವಾಡ ಜಿಲ್ಲೆ ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಿತು. ಬೆಳಗ್ಗೆ 7 ಗಂಟೆಯಿಂದ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆವರೆಗೆ ನಡೆಯಿತು. ಎರಡೂ ಕ್ಷೇತ್ರಗಳಲ್ಲೂ ಶಾಂತಿಯುತವಾಗಿ ಮತದಾನ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ 70.30% ರಷ್ಟು, ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಶೇ. 81.33 ರಷ್ಟು ಮತದಾನ ಆಗಿದೆ ಎಂದು ರಾಜ್ಯ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಕುಂದಗೋಳ ಕ್ಷೇತ್ರದಲ್ಲಿ ಒಟ್ಟು 8 ಅಭ್ಯರ್ಥಿ ಹಾಗೂ ಚಿಂಚೋಳಿ ಕ್ಷೇತ್ರದಲ್ಲಿ 17 ಅಭ್ಯರ್ಥಿಗಳ ಭವಿಷ್ಯವನ್ನ ಮತದಾರ ಬರೆದಿದ್ದು, ಮೇ 23 ರಂದು ಫಲಿತಾಂಶ ಗೊತ್ತಾಗಲಿದೆ.  ಚಿಂಚೋಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ಮತ್ತು ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ ನಡುವೆ ಟಪ್ ಫೈಟ್ ನಡೆದಿದೆ. ಕುಂದಗೋಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಹಾಗೂ ಬಿಜೆಪಿ ಅಭ್ಯರ್ಥಿ ಎಸ್​ಐ ಚಿಕ್ಕನಗೌಡರ್ ನಡುವೆ ತೀವ್ರ ಪೈಪೋಟಿ ನಡೆದಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv