ಉಪ-ಚುನಾವಣೆ ಹಿನ್ನೆಲೆ: ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು: ರಾಜ್ಯದ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆ ಹಿನ್ನೆಲೆಯಲ್ಲಿ ಆ ಕ್ಷೇತ್ರಗಳ ವ್ಯಾಪ್ತಿಗೆ ಬರುವ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಬಳ್ಳಾರಿ ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ಬೆಳಗ್ಗೆ 7 ರಿಂದ ಸಂಜೆ 6 ರ ತನಕ ಮತದಾನ ನಡೆಯಲಿದೆ. ಈ ಹಿನ್ನೆಯಲ್ಲಿ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ, ಆ ಎಲ್ಲಾ ಕ್ಷೇತ್ರಗಳ ವ್ಯಾಪ್ತಿಗೆ ಬರುವ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv