ಡಿಕೆಶಿ ನಿವಾಸದ ಬಳಿ ಅಪಘಾತ, ಬೈಕ್​ ಸವಾರ ಸಾವು..

ಕನಕಪುರ : ಬೈಕ್‌ಗೆ ಟಿಪ್ಪರ್​ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕನಕಪುರದಲ್ಲಿ ನಡೆದಿದೆ. ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ 27 ವರ್ಷದ ಯುವಕ ಸಾಗರ್​ ಮೃತ ದುರ್ದೈವಿ.

ಬೈಕ್‌ನಲ್ಲಿ ಬೆಂಗಳೂರಿನಿಂದ ಮಳವಳ್ಳಿ ಕಡೆಗೆ ಹೋಗುತ್ತಿದ್ದ ವೇಳೆ  ಸಾಗರ್​ ಟಿಪ್ಪರ್​ ಲಾರಿಯನ್ನ ಓವರ್​ ಟೇಕ್​ ಮಾಡಲು ಹೋದಾಗ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಸಾಗರ್​ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇಂಧನ ಸಚಿವ ಡಿ.ಕೆ. ಶಿವಕುಮಾರ್​ ರವರ ಕನಕಪುರ ನಿವಾಸದ ಸಮೀಪವೇ ಈ ಘಟನೆ ನಡೆದಿದ್ದು, ಸ್ಥಳಕ್ಕೇ ಆಗಮಿಸಿದ  ಕನಕಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *