ಉಪಚುನಾವಣೆ ಬಿಜೆಪಿಗೆ ಮಹತ್ವದ್ದಾಗಿದೆ- ಬಿ.ವೈ.ರಾಘವೇಂದ್ರ

ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಉಪ ಚುನಾವಣೆಗೆ ಹೀಗಾಗಲೇ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪ ಇಂದು ತಮ್ಮ ಪುತ್ರ ಬಿ.ವೈ ರಾಘವೇಂದ್ರ ಪರ ಅಧಿಕೃತವಾಗಿ ಪ್ರಚಾರವನ್ನು ಆರಂಭಿಸಿದ್ದಾರೆ. ತವರು ಕ್ಷೇತ್ರ ಶಿಕಾರಿಪುರದ ಮಂಗಳ ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು ಮತಯಾಚನೆ ಮಾಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಸೇರಿದಂತೆ ಇತರ ಮುಖಂಡರು ಭಾಗಿಯಾಗಿದ್ದಾರೆ.

ಈ ವೇಳೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ, ಈ ಉಪ ಚುನಾವಣೆ ಬಿಜೆಪಿಗೆ ಮಹತ್ವದ್ದಾಗಿದೆ. 8 ವಿಧಾನಸಭಾ ಕ್ಷೇತ್ರಗಳು ನಮ್ಮ ವ್ಯಾಪ್ತಿಗೆ ಬಂದಿರುವುದು ನನ್ನ ಪುಣ್ಯ. ಅತೀ ಹೆಚ್ಚು ಮತಗಳ ಅಂತರದ ಮೂಲಕ ಗೆಲ್ಲುವ ವಿಶ್ವಾಸ ಇದೆ ಎಂದರು. ಅಲ್ಲದೇ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೀತಾ ಇಲ್ಲ ಎಂದು ಆರೋಪಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv