ಸಿ.ಪಿ.ಯೋಗೇಶ್ವರ್​ರಿಂದ ರಮೇಶ್ ಜಾರಕಿಹೊಳಿ ಭೇಟಿ

ಬೆಂಗಳೂರು: ಕಾಂಗ್ರೆಸ್​ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿಯವರನ್ನು ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಭೇಟಿ ಮಾಡಿದ್ದಾರೆ. ನಗರದ ಸೆವೆನ್ ಮಿನಿಸ್ಟರ್ ಕ್ವಾಟ್ರಸ್ ನಿವಾಸಕ್ಕೆ ಆಗಮಿಸಿದ ಯೋಗೇಶ್ವರ್,​ ರಮೇಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ರು. ಸಿ.ಪಿ.ಯೋಗೇಶ್ವರ್ ಬೆನ್ನಲ್ಲೇ ನೆಲಮಂಗಲ ಮಾಜಿ ಬಿಜೆಪಿ ಶಾಸಕ ನಾಗರಾಜು ಕೂಡಾ ಭೇಟಿ ರಮೇಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿದ್ರು. ಸದ್ಯ ಬಿಜೆಪಿ ನಾಯಕರ ಜೊತೆ ರಮೇಶ್​ ಜಾರಕಿಹೊಳಿಯವರ ಚರ್ಚೆ ತೀವ್ರ ಕುತೂಹಲ ಮೂಡಿಸಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv