ಕೈ ತಪ್ಪಿದ ಸಚಿವ ಸ್ಥಾನ, ಶಿವಳ್ಳಿ ಬೆಂಬಲಿಗರ ಪ್ರತಿಭಟನಾ ಱಲಿ

ಹುಬ್ಬಳ್ಳಿ: ಕುಂದಗೋಳ‌ ಕಾಂಗ್ರೆಸ್ ಶಾಸಕ‌‌ ಸಿ.ಎಸ್ ಶಿವಳ್ಳಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಶಿವಳ್ಳಿ ಬೆಂಬಲಿಗರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ಶಿವಳ್ಳಿ ಬೆಂಬಲಿಗರು ಹಾಗೂ ಕುಂದಗೋಳ ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತರು ನಗರದ ಡಾ.ಅಂಬೇಡ್ಕರ್ ಪ್ರತಿಮೆಯಿಂದ ಸಂಗೊಳ್ಳಿ ರಾಯಣ್ಣ ವೃತದವರೆಗೆ ಪ್ರತಿಭಟನಾ ಱಲಿ ನಡೆಸಿದ್ರು. ಈ ವೇಳೆ ಕುರುಬ ಸಮುದಾಯಕ್ಕಷ್ಟೇ ಅಲ್ಲದೇ ಉತ್ತರ ಕರ್ನಾಟಕದ ಹಿಂದುಳಿದ ಜನಾಂಗಕ್ಕೆ ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ ಹಾಗೂ ಕೋರ್ಟ್ ವೃತ್ತದಲ್ಲಿ 30 ನಿಮಿಷಕ್ಕೂ ಹೆಚ್ಚು ಕಾಲ ಟ್ರಾಫಿಕ್ ಜಾಮ್  ಉಂಟಾಗಿತ್ತು. ಇನ್ನು, ಟ್ರಾಫಿಕ್ ಜಾಮ್‌ನಿಂದ ವಾಹನ ಸವಾರರ ಪರದಾಟ ನಡೆಸುವಂತಾಯಿತು. ಟ್ರಾಫಿಕ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv