ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳು

ಹಾವೇರಿ:ಜಿಲ್ಲೆಯಲ್ಲಿ ಅಂತಿಮವಾಗಿ ಆರು ಕ್ಷೇತ್ರಗಳಲ್ಲಿ 64 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.ಇದರಲ್ಲಿ 58 ಪುರುಷ ಅಭ್ಯರ್ಥಿಗಳು, 6 ಮಹಿಳಾ ಅಭ್ಯರ್ಥಿಗಳು ಇದ್ದಾರೆ. ಹಾವೇರಿಯಲ್ಲಿ ಸುದ್ದಿಗೊಷ್ಠಿ ನಡೆಸಿದ ಜಿಲ್ಲಾಧಿಕಾರಿ ಡಾ. ಎಂ.ವಿ ವೆಂಕಟೇಶ್, ಚುನಾವಣಾಧಿಕಾರಿಗಳು ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇದುವರೆಗೂ ಹಾವೇರಿ ಜಿಲ್ಲೆಯಲ್ಲಿ ಒಟ್ಟಾರೆ ರೂ. 7,67,733 ಅಧಿಕ ಮೊತ್ತದ ಮಧ್ಯ ವಶಪಡಿಸಿಕೊಳ್ಳಲಾಗಿದೆ. ಚುನಾವಣೆಗೆ ಸಂಬಂಧಿಸಿದ ಅಕ್ರಮಗಳಲ್ಲಿ ಪಾಲ್ಗೊಂಡ 2 ವಾಹನ, 29 ಬೈಕ್, ಒಂದು ಸೈಕಲ್ ವಶಪಡಿಸಿಕೊಂಡಿದ್ದು, ಇದುವರೆಗೂ ಒಟ್ಟು 30 ಲಕ್ಷ ರೂಪಾಯಿ ಹಣ ಜಪ್ತಿ ಮಾಡಲಾಗಿದೆ ಎಂದು ವಿವರ ನೀಡಿದರು.