ಮದುವೆ ಮುಗಿಸಿಕೊಂಡು ವಾಪಾಸಾಗುತ್ತಿದ್ದ ವೇಳೆ ಅಪಘಾತ: ಮೂವರ ಸಾವು

ಚಿತ್ರದುರ್ಗ: ಸಂಬಂಧಿಕರ ಮದುವೆ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಮಾಡನಾಯಕನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಅಪಘಾತ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂದಾರ (19), ರುಕ್ಮಿಣಿ(20) ಕಾರು ಚಾಲಕ ನೆವಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹೇಂದ್ರ ಮತ್ತು ಮನೋಹರ್ ತೀವ್ರವಾಗಿ ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ನಿನ್ನೆ ಮುಧೋಳದಲ್ಲಿ ಸಂಬಂಧಿಕರ ಮದುವೆ ಮುಗಿಸಿ ತಡರಾತ್ರಿ ಬೆಂಗಳೂರಿನತ್ತ ಪ್ರಯಾಣಿಸಿದ್ದ್ದರು. ಇಂದು ಬೆಳಗಿನ ಜಾವ ಎದುರುನಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಲಾಗಿದೆ. ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.