ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಐವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯೂರಿನ ಜವಗೊಂಡನಹಳ್ಳಿಯಲ್ಲಿ ನಡೆದಿದೆ.
ಗೋವಾದಿಂದ ತಮಿಳುನಾಡಿಗೆ ತೆರಳುತ್ತಿದ್ದ ಕಾರು ಅಚಾನಕ್ಕಾಗಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಸದ್ದಾಂ ಹುಸೇನ್(22), ಸದ್ದಾಂ(21), ತೌಸಿಫ್ ಅಹಮ್ಮದ್(24), ಶಾರೂಕ್ (20) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರಲ್ಲಿ, ಆಸೀಫ್​​ (21) ಎಂಬಾತ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ. ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದವರೆಲ್ಲ ತಮಿಳುನಾಡು ಮೂಲದವರೆಂದು ತಿಳಿದುಬಂದಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.