ಮಾಗಡಿ ಬಳಿ ಭೀಕರ ಅಪಘಾತ: ಮಂಡ್ಯದ ಇಬ್ಬರ ಸಾವು

ಮಾಗಡಿ: ರಾಮನಗರ ಜಿಲ್ಲೆ‌ ಮಾಗಡಿ ತಾಲ್ಲೂಕಿನ ಸೋಲೂರು ಗ್ರಾಮದ ಬಳಿ ನಿನ್ನೆ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.
ಹಾಸನ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸೋಲೂರು ಬಳಿ ಈ ಘಟನೆ ನಡೆದಿದೆ. ಮೃತಪಟ್ಟವರು ಮಂಡ್ಯ ತಾ. ಬಸರಾಳು ಗ್ರಾಮದವರು.
ಬಸರಾಳು ಗ್ರಾಮದ ಗೋಪಾಲ್ ಪುತ್ರ ಅರುಣಾ(22), ಅಲಮೇಲಮ್ಮ ಪುತ್ರ (ರಾಜ ) ಮೃತ ದುರ್ದೈವಿಗಳು. ಸೋಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv