ಡಿವೈಡರ್ ದಾಟಿ, ಲಾರಿಗೆ ಡಿಕ್ಕಿ: ಕಾರು ಚಾಲಕಿ ಸ್ಥಳದಲ್ಲೇ ಸಾವು

ತುಮಕೂರು: ರಾಜ್ಯದಲ್ಲಿ ಇಂದು ಅದೇಕೋ ಅಲ್ಲಲ್ಲಿ ದುರಂತ ಸಾವುಗಳು ಕಂಡುಬಂದಿವೆ. ಶಿರಾ ತಾಲ್ಲೂಕಿನ ಮುತ್ತು ಡಾಬಾ ಬಳಿಯೂ ಇಂತಹುದೇ ಘಟನೆ ನಡೆದಿದೆ. ಕಾರು ಚಲಾಯಿಸುತ್ತಿದ್ದ ಯುವತಿಯೊಬ್ಬಳು ರೋಡ್ ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇನ್ನೊಬ್ಬ  ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಹಿರಿಯೂರಿನಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಕಾರು ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮಾಧುರಿ (18) ಸಾವನ್ನಪ್ಪಿದ್ದಾಳೆ. ಕಾರಿನಲ್ಲಿದ್ದ ಇನ್ನೋರ್ವ ಯುವತಿ ಶ್ರೇಯಾ ಸ್ಥಿತಿ ಗಂಭೀರವಾಗಿದ್ದು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾವರೆಕೆರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv