ತಡೆಗೊಡೆಗೆ ಕಾರು ಡಿಕ್ಕಿ: ಮಹಿಳೆ ಸಾವು

ತುಮಕೂರು: ನಿಯಂತ್ರಣ ತಪ್ಪಿ ತಡೆಗೊಡೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಮಹಿಳೆ ಮೃತಪಟ್ಟಿರುವ ಘಟನೆ ತುಮಕೂರು ಹೊರವಲಯದ ಗೂಳೂರು ಬಳಿಯ ಪೋದಾರ್​ ಶಾಲೆ ಬಳಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ವಿನುತ(28) ಎಂದು ಗುರುತಿಸಲಾಗಿದೆ. ದಂಪತಿ ಮತ್ತು ಮಕ್ಕಳು ತೋಟಕ್ಕೆ ತೆರಳಿ ವಾಪಸ್​ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ವಿನುತಾ ಪತಿ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.