ಇಂದು ಕೊಲ್ಕತ್ತಾ ಪೊಲೀಸ್ ಕಮಿಷನರ್‌ಗೆ ಸಿಬಿಐ ಗ್ರಿಲ್

ಶಿಲ್ಲಾಂಗ್: ಶಾರದಾ ಚಿಂಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೊಲ್ಕತ್ತಾ ಪೊಲೀಸ್ ಕಮಿಷನರ್ ರಾಜೀವ್‌ ಕುಮಾರ್‌ಗೆ ಇಂದು ಸಿಬಿಐ ಡ್ರಿಲ್ ಮುಂದುವರಿಯಲಿದೆ. ಕಳೆದ ಮೂರು ದಿನಗಳಿಂದ ಸಿಬಿಐ ತನಿಖೆಗೆ ರಾಜೀವ್‌ ಕುಮಾರ್ ಹಾಜರಾಗಿದ್ರು. ಟಿಎಂಸಿ ಮಾಜಿ ಸಂಸದ ಕುನಾಲ್ ಘೋಷ್ ಅವರನ್ನೂ ಸಹ ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. ಇನ್ನು ನಿನ್ನೆ ವಿಚಾರಣೆ ನಡೆಸಿದ್ದ ಸಿಬಿಐ ಅಧಿಕಾರಿಗಳು ಹಲವಾರು ಮಾಹಿತಿಗಳನ್ನು ಕಲೆಹಾಕಿದ್ದಾರೆ.
ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಭಾರೀ ಹೈಡ್ರಾಮವೇ ಸೃಷ್ಟಿಯಾಗಿತ್ತು. ವಿಚಾರಣೆಗೆ ಬಂದಿದ್ದ ಸಿಬಿಐ ಅಧಿಕಾರಿಗಳನ್ನು ಬಂಧಿಸಿ, ತದನಂತರ ಕೇಂದ್ರ ಸರ್ಕಾರದ ವಿರುದ್ಧವೇ ಮಮತಾ ಬ್ಯಾನರ್ಜಿ ಪ್ರತಿಭಟನೆ ನಡೆಸಿದ್ರು. ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಿಬಿಐ ವಿಚಾರಣೆಗೆ ಸಹಕಾರ ನೀಡುವಂತೆ ಹಾಗೂ ವಿಚಾರಣೆಗೆ ಹಾಜರಾಗುವಂತೆ ರಾಜೀವ್ ಕುಮಾರ್ ಅವರಿಗೆ ಸೂಚನೆ ನೀಡಿತ್ತು.

Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv