ಬಡ್ಡಿ ದಂಧೆಕೋರರ ಚಳಿ ಬಿಡಿಸಿದ ಸಿಸಿಬಿ

ಬೆಂಗಳೂರು: ನಗರದಲ್ಲಿ ಸಿಸಿಬಿ ದಾಳಿ ಮುಂದುವರೆದಿದೆ. ಇಂದು ನಗರದ 15 ಕಡೆ ಸಿಸಿಬಿ ಅಧಿಕಾರಿಗಳು ಏಕಕಾಲಕ್ಕೆ ಮೀಟರ್ ಬಡ್ಡಿ ದಂಧೆಕೋರರ ಮನೆ ಮೇಲೆ ದಾಳಿ ನಡೆಸಿದ್ದಾರೆ. ವಿಜಯನಗರ, ಕಾಮಾಕ್ಷಿ ಪಾಳ್ಯ, ಚಂದ್ರಾಲೇಔಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆದಿದೆ. ದಾಳಿ ವೇಳೆ ಮೀಟರ್ ಬಡ್ಡಿಕೋರರ ಬಳಿ ಇದ್ದ ಖಾಲಿ ಚೆಕ್​​​ಗಳು, ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಸೇರಿದಂತೆ ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಕೆಲ ದಿನಗಳ ಹಿಂದೆ ಕೇಂದ್ರ ಅಪರಾಧ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಅಲೋಕ್ ಕುಮಾರ್ ಅಧಿಕಾರವಹಿಸಿಕೊಂಡ ಮೇಲೆ ನಗರದ ಕುಖ್ಯಾತ ರೌಡಿಗಳ ಮನೆಗಳು, ಅಡ್ಡೆಗಳು, ಕಟ್ಟಡಗಳ ಮೇಲೆ 100 ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಲಾಗಿತ್ತು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv