ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರ ಪ್ರತಿಭಟನೆ

ಶಿವಮೊಗ್ಗ: ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್​ಗೆ ಕೇಂದ್ರ ಸರ್ಕಾರ ನೀಡುತ್ತಿರುವ ಕಿರುಕುಳ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅವರ ಅಭಿಮಾನಿಗಳು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ಸಿಬಿಐ, ಐಟಿ ಇಲಾಖೆಯ ಅಧಿಕಾರ ದುರುಪಯೋಗ ಪಡಿಸಿಕೊಂಡು ಕೇವಲ ಕಾಂಗ್ರೆಸ್​ ನಾಯಕರ ಮೇಲೆ ದಾಳಿ ನಡೆಸಲಾಗುತ್ತಿದೆ. ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರ ಮತ್ತು ಅಮಿತ್​ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv