ಇಂದು ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: 2019ರ ಸಿಇಟಿ ಫಲಿತಾಂಶವನ್ನು ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಲಿದೆ. ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುದ್ದಿಗೋಷ್ಠಿ ನಡೆಸಲಿದ್ದು, ಮಧ್ಯಾಹ್ನ 1 ಗಂಟೆ ವೇಳೆಗೆ http://kea.kar.nic.in, http://cet.kar.nic.in ಹಾಗೂ http://kar.results.nic.in ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

ಸಿಇಟಿ ಫಲಿತಾಂಶದ ಪಟ್ಟಿಯನ್ನ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಬಿಡುಗಡೆ ಮಾಡಲಿದ್ದಾರೆ. ಕಳೆದ ಏಪ್ರಿಲ್ 29 ಹಾಗೂ 30 ರಂದು ವೈದ್ಯಕೀಯ, ದಂತವೈದ್ಯಕೀಯ, ಇಂಜಿನಿಯರಿಂಗ್​​ ಸೇರಿದಂತೆ ವೃತ್ತಿಪರ ಕೋರ್ಸ್​ಗಳಿಗೆ ಸಿಇಟಿ ಪರೀಕ್ಷೆ ನಡೆದಿತ್ತು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದು, ಶೇಕಡಾ 92ರಷ್ಟು ಜನ ಪರೀಕ್ಷೆ ಬರೆದಿದ್ದರು.

Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv