ಕೊನೆಗೂ ಚಾರ್ಮಾಡಿ ಘಾಟ್ ಟ್ರಾಫಿಕ್​ ಕ್ಲಿಯರ್​​..!

ಮಂಗಳೂರು: ಭಾರಿ ಮಳೆಯಿಂದಾಗಿ, ಗುಡ್ಡ ಕುಸಿದು ಬೆಳಗ್ಗೆಯಿಂದ ಚಾರ್ಮಾಡಿ ಘಾಟ್​​ನಲ್ಲಿ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ಇದೀಗ ಸಿಕ್ಕಿ ಹಾಕಿಕೊಂಡಿದ್ದ ವಾಹನಗಳು ನಿಧಾನವಾಗಿ ಸಂಚಾರ ಆರಂಭಿಸಿವೆ. ಭಾರಿ ಮಳೆಯಿಂದಾಗಿ ಬೆಳಗ್ಗೆ ಗುಡ್ಡ ಕುಸಿದ ಪರಿಣಾಮ ಒಟ್ಟು 210 ಕ್ಕೂ ಹೆಚ್ಚು ವಾಹನಗಳು ಟ್ರಾಫಿಕ್​ನಲ್ಲಿ ಸಿಲುಕಿಕೊಂಡಿದ್ದವು. ಇದರಿಂದಾಗಿ ಸುಮಾರು 1500 ರಷ್ಟು ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದರು. ಸದ್ಯ ಮಣ್ಣು ತೆರವುಗೊಳಿಸಿದ್ದು, ಚಾರ್ಮಾಡಿ ಘಾಟ್​ ರಸ್ತೆಯನ್ನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಆದರೆ ಮುಂದಿನ ಎರಡು ದಿನ ಕಾಲ ಮಳೆ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ 2 ದಿನಗಳ ವರೆಗೆ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ ಅಂತ ದಕ್ಷಿಣ ಕನ್ನಡ ಎಸ್ಪಿ ರವಿಕಾಂತೇ ಗೌಡ ಮಾಹಿತಿ ನೀಡಿದ್ದಾರೆ.

ಟ್ರಾಫಿಕ್ ಜಾಮ್​​ನಲ್ಲಿ ಸಿಲುಕಿದ್ದ ಮಹಿಳೆ ಅಸ್ವಸ್ಥ
ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿದ ಪರಿಣಾಮ ಟ್ರಾಫಿಕ್​ ಜಾಮ್​ ಉಂಟಾಗಿದೆ. ಈ ಟ್ರಾಫಿಕ್ ಜಾಮ್​​ನಲ್ಲಿ ಸಿಲುಕಿದ್ದ ಮಹಿಳೆಯೊಬ್ಬರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡಿರುವ ಮಹಿಳೆ ಉತ್ತರ ಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ಮಹಿಳೆಯನ್ನು ಆ್ಯಂಬ್ಯುಲೆನ್ಸ್ ಮೂಲಕ ಬೆಳ್ತಂಗಡಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಹಿಳೆ ಕುಟುಂಬಸ್ಥರೊಂದಿಗೆ ಬಸ್​​ ಮೂಲಕ ಧರ್ಮಸ್ಥಳ ಕ್ಷೇತ್ರಕ್ಕೆ ತೆರಳುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv