ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಪ್ರೊಟೆಸ್ಟ್​​​

ರಾಯಚೂರು: ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯ ಆಗುತ್ತಿರುವುದನ್ನು ತಪ್ಪಿಸಿ ಎಂದು ಆಗ್ರಹಿಸಿ ಬ್ಯಾಂಕಿಂಗ್ ಉದ್ಯೋಗದ ಆಕಾಂಕ್ಷಿಗಳು ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ವೃತ್ತದಲ್ಲಿ ಸೇರಿದ್ದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಪ್ರಕಾರ 2012 ರಿಂದ 2014ರ ನಿಯಮದಂತೆ ಜಾರಿಗೊಳ್ಳಬೇಕು. ನೇಮಕಾತಿ ವೇಳೆ ಒಂದು ವಿಷಯವನ್ನು ಕನ್ನಡದಲ್ಲಿ ಓದಿದವರಿಗೆ ಆದ್ಯತೆ ನೀಡಬೇಕು. ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿದ್ರು. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ಕೇಂದ್ರ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv