ಚಿರತೆ ದಾಳಿ, ಕಂಗೆಟ್ಟ ಕೋಟೆ ನಾಡಿನ ಜನ, ಅರಣ್ಯಾಧಿಕಾರಿಗಳ ವಿರುದ್ಧ ಹಿಡಿಶಾಪ

ಚಿತ್ರದುರ್ಗ: ಮನೆ ಕೆಲಸಕ್ಕೆ ಹೋಗುತ್ತಿದ್ದ ಒಂಟಿ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಹೊಸದುರ್ಗ ಪಟ್ಟಣದ ಕಡೂರು ರಸ್ತೆಯಲ್ಲಿ ನಡೆದಿದೆ.
ಹನುಮಕ್ಕ (50) ಚಿರತೆ ದಾಳಿಗೆ ಒಳಗಾದ ಮಹಿಳೆ. ಮನೆಗೆಲಸಕ್ಕೆ ಹೋಗುತ್ತಿದ್ದ ಹನುಮಕ್ಕ ಮೇಲೆ ಚಿರತೆ ದಾಳಿ ನಡೆಸಿ ತಲೆ ಹಾಗೂ ಕಾಲುಗಳಿಗೆ ಕಚ್ಚಿ ಗಾಯಗೊಳಿಸಿದೆ. ಚಿರತೆ ದಾಳಿಯಿಂದಾಗಿ ಗಾಯಗೊಂಡಿದ್ದ ಮಹಿಳೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸದುರ್ಗ ಪಟ್ಟಣ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಲ್ಲೂ ಚಿರತೆ ಕಾಣಿಸಿಕೊಂಡಿದೆ. ಚಿರತೆ ದಾಳಿಯಿಂದಾಗಿ ಆತಂಕಗೊಂಡ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ.

ನಿಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂರ್ಪಕಿಸಿ:contact@firstnews.tv