ಬಳ್ಳಾರಿ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗುಡ್ಡದ ನಿವಾಸಿಗಳಲ್ಲಿ ಆತಂಕ

ಬಳ್ಳಾರಿ: ಬಳ್ಳಾರಿ ಗುಡ್ಡದಲ್ಲಿ ಚಿರತೆ ಪ್ರತ್ಯಕ್ಷವಾಗಿ ಗುಡ್ಡದ ಬಳಿಯ ನಿವಾಸಿಗಳಲ್ಲಿ ಆತಂಕ ಹುಟ್ಟಿಸಿದೆ. ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆಯ ಸಿಬ್ಬಂದಿ ಈಗಾಗಲೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಕರಿಮಾರಮ್ಮ ಗುಡ್ಡ ಮತ್ತು ಆಂಜನೇಯ ಗುಡಿ ಬಳಿಯ ಗುಡ್ಡದಲ್ಲಿ ಬೋನು ಅಳವಡಿಸಿದ್ದಾರೆ. ಇನ್ನು ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಅಲ್ಲದೆ ಆದಷ್ಟು ಬೇಗ ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆ ಸಿಬ್ಬಂದಿಗೆ ಸೂಚನೆ ನೀಡಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv