ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಮುಖ್ಯಮಂತ್ರಿ ಕುಮಾರಸ್ವಾಮಿ

ಚಿಕ್ಕಮಗಳೂರು: ಇಂದು ಶೃಂಗೇರಿ ಶಾರದಾಂಬೆ ದರ್ಶನವನ್ನು ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಪಡೆದರು. ಬಳಿಕ ಮಾತನಾಡಿದ  ಸಿಎಂ ಕುಮಾರಸ್ವಾಮಿ, ಪುತ್ರ ನಿಖಿಲ್​ ಕುಮಾರಸ್ವಾಮಿ ಮದುವೆ ವಿಚಾರವಾಗಿ ಶಾರದಾಂಬೆ ಹಾಗೂ ಗುರುಗಳ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಹೇಳಿದರು. ಶೃಂಗೇರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಮಗ ನಿಖಿಲ್​ ಕುಮಾರಸ್ವಾಮಿ ಮದುವೆ ವಿಷಯದ ಕುರಿತು ಮಠದ ಗುರುಗಳ ಜೊತೆಗೆ ಚರ್ಚಿಸಿದ್ದೇವೆ. ಎಲ್ಲಾ ಒಳ್ಳೆಯ ಕಾರ್ಯಕ್ಕೂ ಗುರುಗಳ ಆರ್ಶೀವಾದ ಇರಬೇಕು. ಶೃಂಗೇರಿ ಕ್ಷೇತ್ರಕ್ಕೂ ನಮ್ಮ ಕುಟುಂಬಕ್ಕೂ ಹಿಂದಿನಿಂದಲೂ ಸಂಬಂಧ ಹಾಗೂ ಅಪಾರ ನಂಬಿಕೆ ಇದೆ. ಕ್ಷೇತ್ರಕ್ಕೆ ಬಂದರೆ ಸಮಸ್ಯೆ ಬಗೆಹರಿಯುತ್ತದೆ ಎಂದು ನಂಬಿಕೆ ಇದೆ ಎಂದು ಹೇಳಿದರು. ಮಠಕ್ಕೆ ವಿಶೇಷ ಪೂಜೆ ಮಾಡಿಸಲು ಬಂದಿಲ್ಲ. ನಿಖಿಲ್​ ಕುಮಾರಸ್ವಾಮಿ ಮದುವೆ ವಿಚಾರವಾಗಿ ಗುರುಗಳ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದರು. ಇದೇ ವೇಳೆ ಕಂಪ್ಲಿ ಶಾಸಕರ ಹೇಳಿಕೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಮಾತನಾಡಲು ಎಲ್ಲರೂ ಸ್ವಂತತ್ರರು ಎಂದು ಕುಮಾರಸ್ವಾಮಿ ಹೇಳಿದರು.