ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಪೋಷಕರ ಸಹಕಾರ ಬೇಕು

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯ್ತಿ, ಕಾರ್ಮಿಕ ಇಲಾಖೆ ಸಹಭಾಗಿತ್ವದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಆಚರಿಸಲಾಯಿತು.

ನಂತರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ಎನ್.ನಾಯಕ್ ಮಾತನಾಡಿ, ಅಭಿವೃದ್ಧಿಗೆ ಮಾರಕವಾಗಿರುವ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಯಲ್ಲಿ ಸರ್ಕಾರದ ಹಲವು ಯೊಜನೆಗಳ ಜೊತೆಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ತಿಳಿಸಿದ್ರು.
ಪೋಷಕರು ತಮ್ಮ ಕುಟುಂಬದ ನಿರ್ವಹಣೆಗೆ ಮಕ್ಕಳನ್ನು ದುಡಿಮೆಗೆ ಕಳುಹಿಸಿ ಬಾಲ ಕಾರ್ಮಿಕರನ್ನಾಗಿ ಮಾಡುತ್ತಾರೆ. ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ, ಉಚಿತ ಊಟ, ಸಮವಸ್ತ್ರ ನೀಡಿದ್ರೂ ಕಲಿಯುವ ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿದೆ. ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ ಇಂತಹ ಪದ್ದತಿಯಿಂದ ಮುಕ್ತಿ ಮಾಡಿ, ಸ್ವತಂತ್ರವಾಗಿ ಬದಕಲು ಮಕ್ಕಳಿಗೆ ಸಹಕರಿಸುವಂತೆ ಕಿವಿಮಾತು ಹೇಳಿದರು.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv