ಹಾಸನದಲ್ಲೂ ಮಕ್ಕಳ ಕಳ್ಳರ ವದಂತಿ

ಹಾಸನ: ರಾಜ್ಯದಲ್ಲಿ ಮಕ್ಕಳ ಕಳ್ಳರ ವದಂತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಸನ ಜಿಲ್ಲೆಯಲ್ಲೂ ಮಕ್ಕಳ ಕಳ್ಳರ ವದಂತಿ ಶುರುವಾಗಿದೆ. ಇದರ ಬೆನ್ನಲ್ಲೇ ಸಕಲೇಶಪುರದ ಬನವಾಸೆ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಿಹಾರ ಮೂಲದ ವ್ಯಕ್ತಿ ಕಳೆದ 2 ದಿನಗಳಿಂದ ಗ್ರಾಮದಲ್ಲಿ ತಿರುಗಾಡುತ್ತಿದ್ದ. ಅನುಮಾನಗೊಂಡ ಗ್ರಾಮಸ್ಥರು ವ್ಯಕ್ತಿಯನ್ನು ಹಿಡಿದು ಸಕಲೇಶಪುರ ಗ್ರಾಮಾಂತರ ಪೊಲೀಸ್ ವಶಕ್ಕೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv