ಮಕ್ಕಳ ಕಳ್ಳರ ವದಂತಿ: ಕಲಬುರ್ಗಿ ಪೊಲೀಸ್​ರಿಂದ ವಿಡಿಯೋ ರಿಲೀಸ್​

ಕಲಬುರ್ಗಿ: ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧೆಡೆ ಮಕ್ಕಳ ಕಳ್ಳರ ವದಂತಿ ಕಾಡ್ಗಿಚ್ಚಿನಂತೆ ಹಬ್ಬಿದ್ದು, ಇದಕ್ಕೆ ಅಮಾಯಕರು ಬಲಿಯಾಗುತ್ತಿರುವುದು ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದೆ. ಮಕ್ಕಳ ಕಳ್ಳರು ಬಂದಿಲ್ಲ, ವದಂತಿಗೆ ಕಿವಿಗೊಡಬೇಡಿ ಎಂದು ಪೊಲೀಸ್​ ಇಲಾಖೆ ಎಷ್ಟೇ ಮನವಿ ಮಾಡಿಕೊಂಡರೂ, ಜನ ಮಾತ್ರ ಅಮಾಯಕರ ಮೇಲೆ ಹಲ್ಲೆ ಮಾಡುವುದನ್ನು ನಿಲ್ಲಿಸುತ್ತಿಲ್ಲ. ಕಲಬುರ್ಗಿ ಜಿಲ್ಲಾ ಪೊಲೀಸ್​ ಇಲಾಖೆ ವದಂತಿಯನ್ನು ಹೋಗಲಾಡಿಸಲು ಒಂದು ಪ್ರಯೋಗ ಮಾಡಿದೆ. ಕಲಬುರ್ಗಿ ಜಿಲ್ಲಾ ಪೊಲೀಸ್​ ಇಲಾಖೆ ಮೂರು ನಿಮಿಷ, ಹದಿನೈದು ಸೆಕೆಂಡ್​​​ನ ವಿಡಿಯೋ ರಿಲೀಸ್ ಮಾಡಿದೆ. ಈ ವಿಡಿಯೋದಲ್ಲಿ ಕಲಬುರ್ಗಿ ಎಸ್​​.ಪಿ ಎ‌ನ್.ಶಶಿಕುಮಾರ್, ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ‌ ದತ್ತಾತ್ರೇಯ ಪಾಟೀಲ್ ರೇವೂರ್ ಹಾಗೂ ಕಲಬುರ್ಗಿ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಅವರುಗಳು ಸಾಮಾಜಿಕ ಜಾಲತಾಣಗಳಲ್ಲಿನ ವದಂತಿಗಳಿಗೆ ಕಿವಿಗೊಡದಂತೆ ಮನವಿ ಮಾಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv