5 ಕಡೆ ಬಾಂಬ್ ಇಟ್ಟಿದ್ದ ದುಷ್ಕರ್ಮಿಗಳಿಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬಾಂಬ್ ಸ್ಪೋಟವಾಗಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಗೋಹಾರ್ ಅಜೀಜ್ ಗೋಮೆನಿ, ಕಮಲ್ ಹಸನ್ ಹಾಗು ಮೊಹಮ್ಮದ್ ಕಪಿಲ್ ಅಕ್ತರ್​ ಶಿಕ್ಷೆಗೊಳಗಾಗಿದ್ದಾರೆ. 50ನೇ ಸೆಷನ್ಸ್ ನ್ಯಾಯಾಲಯದಲ್ಲಿ ನ್ಯಾಯಾಧೀಶ ಸಿದ್ದಲಿಂಗ ಪ್ರಭು ಅವರಿಂದ ಆದೇಶ ಹೊರಡಿಸಲಾಗಿದೆ.

ಈ ಸಂಬಂಧ ಪತ್ರಕರ್ತರೊಂದಿಗೆ ಮಾತನಾಡಿದ ಪಬ್ಲಿಕ್​ ಪ್ರಾಸಿಕ್ಯೂಟರ್​ ರವೀಂದ್ರ, ಚಿನ್ನಸ್ವಾಮಿ ಕ್ರೀಡಾಂಗಣದ ಸ್ಫೋಟದಲ್ಲಿ ಒಟ್ಟು 5 ಕಡೆ ಬಾಂಬ್ ಇಟ್ಟಿದ್ರು. ಈ ಪ್ರಕರಣದಲ್ಲಿ 3 ಜನ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಹೀಗಾಗಿ ಮೂವರಿಗೂ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಸೇರಿದಂತೆ ಒಟ್ಟು 7 ವರ್ಷಗಳ ಶಿಕ್ಷೆ ವಿಧಿಸಲಾಗಿದೆ. ಅಲ್ಲದೇ ₹ 7.5 ಲಕ್ಷ ದಂಡವನ್ನೂ ವಿಧಿಸಲಾಗಿದೆ ಎಂದರು.

ಇನ್ನು, ಇದೇ ಪ್ರಕರಣದಲ್ಲಿ ಯಾಸಿನ್ ಭಟ್ಕಳ್ ಸೇರಿದಂತೆ 13 ಮಂದಿ ಆರೋಪಿಗಳಿದ್ದಾರೆ. ಇದರಲ್ಲಿ ಮೂವರಿಗೆ ಮಾತ್ರ ಕೋರ್ಟ್ ಶಿಕ್ಷೆ ವಿಧಿಸಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv