ಡಾ.ಸುಧಾಕರ್​ ನೇಮಕಕ್ಕೆ ಕೆಲವು ತಾಂತ್ರಿಕ ತೊಂದರೆಗಳಿವೆ: ಸಿಎಂ

ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಗೆ ಡಾ.ಸುಧಾಕರ್​ರನ್ನ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಕೆಲವು ತಾಂತ್ರಿಕ ತೊಂದರೆಗಳಿವೆ. ಅವುಗಳನ್ನೆಲ್ಲಾ ಬೀದಿಯಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ ಅಂತಾ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಎಲ್ಲವನ್ನೂ ಬೀದಿಯಲ್ಲಿ ಬಹಿರಂಗ ಪಡಿಸಿ ಮುಖ್ಯಮಂತ್ರಿ ಹುದ್ದೆಯ ಘನತೆಯನ್ನು ಕುಗ್ಗಿಸಲು ಇಚ್ಛಿಸುವುದಿಲ್ಲ. ಎಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಬೇಕೋ ಆ ನಿರ್ಧಾರವನ್ನ ತೆಗೆದುಕೊಳ್ಳುತ್ತೇನೆ ಎಂದರು.

ಇನ್ನು ಮಂಗನಕಾಯಿಲೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ. ಖಾಯಿಲೆ ಹರಡದಂತೆ ಸೂಕ್ತ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಕಾಯಿಲೆಗೆ ತುತ್ತಾಗಿರುವವರಿಗೂ ಸರ್ಕಾರ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.