ಆಯುರ್ವೇದ ಪಂಚಕರ್ಮ ಚಿಕಿತ್ಸೆ ಅರ್ಧಕ್ಕೆ ಮೊಟಕುಗೊಳಿಸಿದ ಸಿಎಂ

ಉಡುಪಿ: ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಆರೋಗ್ಯ ಸುಧಾರಿಸಲು ಉಡುಪಿಗೆ ಬಂದಿದ್ದೆ. ಆದ್ರೆ ಶ್ರೀಲಂಕಾದ ಸ್ಫೋಟ ಪ್ರಕರಣ ನನ್ನನ್ನು ಘಾಸಿಗೊಳಿಸಿದೆ. ನಿನ್ನೆಯಿಂದ ನನಗೆ ಇದೇ ತಲೆಯಲ್ಲಿ ಕಾಡುತ್ತಿದೆ. ನನ್ನ ಆತ್ಮೀಯರು ಮರಣ ಹೊಂದಿದ್ದಾರೆ. ಮೂರು, ನಾಲ್ಕು ದಿನ ಕಾಪುವಿನಲ್ಲಿ ಆಯುರ್ವೇದಿಕ್ ಪಂಚಕರ್ಮ ಚಿಕಿತ್ಸೆ ಪಡೆಯಬೇಕೆಂದಿದ್ದೆ. ವೈದ್ಯರ ಜೊತೆ ಚರ್ಚೆ ಮಾಡಿದ್ದೇನೆ. ಏಪ್ರಿಲ್​ 27ರ ನಂತರ ಮತ್ತೆ ಉಡುಪಿಗೆ ಬರಲು ವೈದ್ಯರು ಸೂಚಿಸಿದ್ದಾರೆ. ಸದ್ಯ ಚಿಕಿತ್ಸೆ ಮುಂದೂಡಿ ಕರ್ತವ್ಯ ಮಾಡಲು ಹೊರಟಿದ್ದೇನೆ ಎಂದು ತಿಳಿಸಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv