ಶೃಂಗೇರಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಿಎಂ

ಚಿಕ್ಕಮಗಳೂರು: ಇದೇ ಮೊದಲ ಬಾರಿಗೆ ಸಿಎಂ ಕುಮಾರಸ್ವಾಮಿ, ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ್ದಾರೆ. ಶೃಂಗೇರಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿದ್ದ ಇಂದಿರಾ ಕ್ಯಾಂಟೀನ್ ಒಂದನ್ನ ಇಂದು ಸಿಎಂ ಕುಮಾರಸ್ವಾಮಿ ಉದ್ಘಾಟಿಸಿದ್ದಾರೆ. ಕ್ಯಾಂಟೀನ್ ಉದ್ಘಾಟನೆಯ ಬಳಿಕ ಸಿಎಂ ಕುಮಾರಸ್ವಾಮಿ ಕೇಸರಿ ಬಾತ್ ಹಾಗೂ ಉಪ್ಪಿಟ್ಟು ಸೇವಿಸಿದರು. ನಂತರ ಸಿಎಂ ಕುಮಾರಸ್ವಾಮಿ ಕೇಸರಿ ಬಾತ್ ಚೆನ್ನಾಗಿದೆ ಎಂದರು. ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಟಿ.ಡಿ.ರಾಜೇಗೌಡ, ಎಂಎಲ್​ಸಿಗಳಾದ ಎಸ್.ಎಲ್.ಬೋಜೇಗೌಡ, ಧರ್ಮೇಗೌಡ ಭಾಗಿಯಾಗಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv