ಆಪರೇಷನ್ ಕಮಲದ ಭೀತಿ, ಕುಮಾರಸ್ವಾಮಿ-ಸಿದ್ದರಾಮಯ್ಯ ದಿಢೀರ್ ಭೇಟಿ

ಬೆಂಗಳೂರು: ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ದಿಢೀರ್ ಭೇಟಿ ಮಾಡಿದ್ದಾರೆ. ಸಿದ್ದರಾಮಯ್ಯ ವಾಸವಿರುವ ಕಾವೇರಿಗೆ ಆಗಮಿಸಿದ ಕುಮಾರಸ್ವಾಮಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ಬಗ್ಗೆ ಸಿದ್ದರಾಮಯ್ಯ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತಿದೆ. ಒಂದು ವೇಳೆ, ಬಿಜೆಪಿ ಆಪರೇಷನ್ ಕಮಲ ನಡೆಸಿ ಸರ್ಕಾರ ಬೀಳಿಸಬಹುದು..! ಉಭಯ ಪಕ್ಷಗಳ ಶಾಸಕರನ್ನ ಸೆಳೆದು ಸರ್ಕಾರ‌ ಪತನದ ಪ್ರಯತ್ನ ನಡೆಸಬಹುದು..! ಹಾಗಾಗಿ ಎಲ್ಲಾ ಶಾಸಕರನ್ನ ಹಿಡಿದಿಟ್ಟುಕೊಳ್ಳುವ ಬಗ್ಗೆ ಇಬ್ಬರೂ ನಾಯಕರು ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ನಾಳೆ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಸರ್ಕಾರದ ಭವಿಷ್ಯದ ಕುರಿತು ಚರ್ಚಿಸಲಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv