‘ನಾವೇನು ಭಿಕ್ಷುಕರಲ್ಲ’ ಕಾಂಗ್ರೆಸ್​ ವಿರುದ್ಧ ಕುಮಾರಸ್ವಾಮಿ ಗರಂ..!

ಮೈಸೂರು: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್​ ನಮಗೆ ಏಳೋ, ಐದೋ, ಮೂರೋ ಸೀಟು ಬಿಟ್ಟು ಕೊಡ್ತಾರೋ ಗೊತ್ತಿಲ್ಲ. ವಿ ಆರ್​​ ನಾಟ್​​ ಬೆಗರ್ಸ್​ ಎಂದು ಕಾಂಗ್ರೆಸ್​ ವಿರುದ್ಧ ಮತ್ತೆ ಸಿಎಂ ಕುಮಾರಸ್ವಾಮಿ ಗರಂ ಆಗಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರ ರಚನೆಯಿಂದ ರಾಷ್ಟ್ರಕ್ಕೆ ಒಂದು ಸಂದೇಶ ರವಾನೆ ಆಗಬೇಕಾದರೆ ಎಲ್ಲರೂ ಕೂತು ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡಬೇಕು. ರಾಜ್ಯದ ಅಭಿವೃದ್ಧಿಗಾಗಿ ಆಡಳಿತ ಕಡೆಗೆ ನಾನು ಗಮನ ಹರಿಸಿದ್ದೇನೆ. ಜೆಡಿಎಸ್​​ ವರಿಷ್ಠರಾದ ಹೆಚ್​​.ಡಿ. ದೇವೇಗೌಡರು ಕಾಂಗ್ರೆಸ್ ಜೊತೆ ಮಾತುಕತೆ ಮೂಲಕ ಸೀಟು ಹಂಚಿಕೆ ಮಾಡಿಕೊಳ್ಳುತ್ತಾರೆ. ಸದ್ಯ ಲೋಕಸಭಾ ಸೀಟು ಹಂಚಿಕೆ ಬಗ್ಗೆ ಯೋಚನೆ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv