ಸುದ್ದಿಗೋಷ್ಠಿಯಲ್ಲಿ ಒಂದೇ ಒಂದು ಮಾತನಾಡದ ಸಿಎಂ, ಡಿಸಿಎಂರಿಂದ ಮಾತ್ರ ವಿವರಣೆ..!

ಬೆಂಗಳೂರು: ಆಡಳಿತಾರೂಢ ಮಿತ್ರ  ಪಕ್ಷಗಳು ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ತಲಾ ಒಂದೊಂದು ಸೀಟು ಗೆದ್ದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್​ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಗೋಷ್ಠಿಯಲ್ಲಿ ಡಿಸಿಎಂ ಪರಮೇಶ್ವರ್ ಫಲಿತಾಂಶದ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರದ ಅಸ್ತಿತ್ವಕ್ಕೆ ಯಾವುದೇ ಧಕ್ಕೆಯಿಲ್ಲ ಎಂದು ತಿಳಿಸಿದರು. ಅದಾದ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರತ್ತ ಸುದ್ದಿಗಾರರು ಪ್ರಶ್ನೆಗಳನ್ನು ಎಸೆದರಾದರೂ ಅವರು ಯಾವುದಕ್ಕೂ ಪ್ರತಿಕ್ರಿಯೆ ನೀಡಲಿಲ್ಲ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv