ಟಿಪ್ಪು ಜಯಂತಿ ಆಚರಣೆಗೆ ತಡೆ, ಪ್ರತಿಕ್ರಯಿಸದ ಸಿಎಂ

ಮೈಸೂರು: ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಮಾಡಿರುವ ಮನವಿಯ ಬಗ್ಗೆ ಪ್ರತಿಕ್ರಿಯಿಸಲು ಸಿಎಂ ಹೆಚ್​.ಡಿ ಕುಮಾರಸ್ವಾಮಿ ನಿರಾಕರಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸದ್ಯ ಯಾವುದೇ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ದಸರಾ ಆಚರಣೆ ಮುಗಿದ ನಂತರ ಆ ಬಗ್ಗೆ ಚರ್ಚಿಸಿ, ತೀರ್ಮಾನ ಮಾಡಲಾಗುವುದು ಅಂತಾ ತಿಳಿಸಿದರು.

ದಸರಾಗೆ ಕಾಂಗ್ರೆಸ್ ಪಕ್ಷದ ನಾಯಕರ ಗೈರಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರು ಲೋಕಸಭಾ ಹಾಗೂ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಅವರೂ ಕೂಡ ದಸರಾ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ ಅಂತಾ ತಿಳಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv