ಧಾರವಾಡದಲ್ಲಿನ ಕಟ್ಟಡ ದುರಂತದ ಸುದ್ದಿ ಕೇಳಿ ಆಘಾತ ಆಗಿದೆ: ಸಿಎಂ

ಬೆಂಗಳೂರು: ಧಾರವಾಡ ಕುಮಾರೇಶ್ವರ ನಗರದಲ್ಲಿ ಇಂದು ಸಂಭವಿಸಿದ ಕಟ್ಟಡ ದುರಂತ ಸಂಬಂಧ ಸಿಎಂ ಕುಮಾರಸ್ವಾಮಿ ಟ್ವೀಟ್​​ ಮಾಡಿದ್ದಾರೆ. ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡದ ಕುಸಿತದ ಬಗ್ಗೆ ತಿಳಿದು ಆಘಾತವಾಗಿದೆ. ಅಪಾಯದಲ್ಲಿ ಸಿಲುಕಿರುವವರ ರಕ್ಷಣೆಗೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇಲ್ಲಿಯವರೆಗೆ ಐದು ಜನರನ್ನು ರಕ್ಷಣೆ ಮಾಡಲಾಗಿದೆ. ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಇರಲು ನಾನು ಸೂಚನೆ ನೀಡಿದ್ದೇನೆ ಅಂತಾ ಕುಮಾರಸ್ವಾಮಿ ಟ್ವೀಟರ್​​ನಲ್ಲಿ ತಿಳಿಸಿದ್ದಾರೆ.


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv