’ಸಿಎಂ ಕುಮಾರಸ್ವಾಮಿ ಹೇಳಿದಂತೆ ನಡೆದುಕೊಳ್ಳಬೇಕು’

ಧಾರವಾಡ: ರಾಜ್ಯ ಸರಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆಯನ್ನ ಜಾರಿಗೆ ತರಬೇಕೆಂದು ಆಗ್ರಹಿಸಿ ಧಾರವಾಡದಲ್ಲಿ ಸರಕಾರಿ ನೌಕರರು ಪ್ರತಿಭಟನೆ ನಡೆಸಿದರು. ನಗರದ ಕಲಾಭವನದಿಂದ ಪ್ರತಿಭಟನಾ‌ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ಹೆಚ್​ ಡಿ ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರೋದಾಗಿ ಹೇಳಿದ್ದರು. ಆದ್ರೆ ಈಗ ಅವರೇ ಸಿಎಂ ಆಗಿದ್ದಾರೆ. ಕೂಡಲೇ ತಾವು ಹೇಳಿದಂತೆ ನಡೆದುಕೊಳ್ಳಬೇಕು ಅಂತಾ ಪ್ರತಿಭಟನಾಕಾರರು ಆಗ್ರಹಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv